alex Certify ಪತ್ರಕರ್ತನ ಮೇಲೆ ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಕರ್ತನ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. 25 ವರ್ಷದ ಪತ್ರಕರ್ತರೊಬ್ಬರು ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಪತ್ರಕರ್ತನನ್ನು ಮನು ಅವಸ್ತಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಪತ್ರಕರ್ತನನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಕಾನ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅಪಾಯದಿಂದ ಪಾರಾಗಿದ್ದಾರೆ. ರಾತ್ರಿ 10.25ರ ಸುಮಾರಿಗೆ ಪಿಡಿ ನಗರದ ನಿವಾಸಿ ಮನು ಅವಸ್ತಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶ ತಕ್ಷಣವೇ ತಿಳಿದುಬಂದಿಲ್ಲ. ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...