ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 60 ವರ್ಷ ದಾಟಿದವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ.
2022ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ಭರವಸೆಯನ್ನು ನೀಡಿತ್ತು. ಇದೀಗ ಇದನ್ನು ನೆರವೇರಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಿದ್ಧವಾಗಿದೆ.
ಈ ಯೋಜನೆ ಅನುಷ್ಠಾನಗೊಂಡ ಬಳಿಕ ಸಾರಿಗೆ ಸಂಸ್ಥೆಗೆ 260 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಹೇಳಲಾಗಿದ್ದು, ಬಜೆಟ್ ನಲ್ಲಿ ಮೀಸಲಿರಿಸುವ ಸಾಧ್ಯತೆ ಇದೆ. ಉತ್ತರ ಪ್ರದೇಶದ ಸರ್ಕಾರಿ ಬಸ್ ಗಳಲ್ಲಿ ಪ್ರತಿನಿತ್ಯ 3.73 ಲಕ್ಷ ಮಹಿಳೆಯರು ಸಂಚರಿಸುತ್ತಿದ್ದು, ಈ ಪೈಕಿ 88,438 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದಾರೆ.