ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ಬಸ್ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿಯೊಂದು ಬಿದ್ದು, ಘೋರ ದುರಂತ ಸಂಭವಿಸಿದೆ.
ಬಸ್ ಮೇಲೆ ಹೈ-ಟೆನ್ಶನ್ ತಂತಿ ಬಿದ್ದು, ವಿನಾಶಕಾರಿ ಬೆಂಕಿ ವಾಹನವನ್ನು ಆವರಿಸಿದೆ. ಗಾಜಿಪುರದ ಮರ್ದಾಹ್ ಪಟ್ಟಣದಲ್ಲಿ ಈ ಭಯಾನಕ ಘಟನೆ ಸಂಭವಿಸಿದೆ. ಬಸ್ ಮಹಾಹರ್ ಪಟ್ಟಣಕ್ಕೆ ತೆರಳುತ್ತಿತ್ತು.
ಮೌವಿನಿಂದ ಮದುವೆ ಪಾರ್ಟಿಯ ಸದಸ್ಯರು ಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಹರ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಹೆಚ್‌ಒ ಧರ್ಮೇಂದ್ರ ಕುಮಾರ್ ಪಾಂಡೆ, ಮದುವೆಗೆ ಬಂದವರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಓವರ್‌ಹೆಡ್ ಹೈ-ವೋಲ್ಟೇಜ್ ವೈರ್‌ನೊಂದಿಗೆ ಸಂಪರ್ಕ ಉಂಟಾಗಿ ಬೆಂಕಿ ಹೊತ್ತಿಕೊಂಡು ವಾಹನವನ್ನು ಆವರಿಸಿದೆ ಎಂದು ತಿಳಿಸಿದ್ದಾರೆ.
ಸಿಎಂ ಆದಿತ್ಯನಾಥ್ ನೆರವು
ಜೀವ ಹಾನಿಗೆ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು. ಎಲ್ಲಾ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಗಾಜಿಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಅಗಲಿದ ಆತ್ಮಗಳಿಗೆ ಶಾಂತಿ ಮತ್ತು ಗಾಯಾಳುಗಳಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಆದಿತ್ಯನಾಥ್ ಹೇಳಿದ್ದಾರೆ.