alex Certify ಮತ್ತೊಂದು ಪಟಾಕಿ ದುರಂತ: ಕೌಶಾಂಬಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಪಟಾಕಿ ದುರಂತ: ಕೌಶಾಂಬಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಹೆವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾರ್ಖಾನೆಯಿಂದ ಹಲವಾರು ಕಿಲೋಮೀಟರ್ ದೂರದಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ.

ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಅವರ ಪ್ರಕಾರ, ಸ್ಫೋಟದ ಬಗ್ಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಎಸ್ಪಿ ಶ್ರೀವಾಸ್ತವ ತಿಳಿಸಿದ್ದಾರೆ. ಕಾರ್ಖಾನೆಯಲ್ಲಿನ ಬೆಂಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದರು.

ಮೃತರ ಗುರುತು ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...