ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್ ಪ್ರಕರಣ ನಡೆದಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಬಿಜೆಪಿ ನಾಯಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳೀಯರು ಕಾರನ್ನು ತಡೆಯಲು ಯತ್ನಿಸಿದ್ದಾರೆ ಆದರೂ ಸಾಧ್ಯವಾಗಿಲ್ಲ. ಅಪಘಾತದಲ್ಲಿ 67 ವರ್ಷದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಜಿತ್ ಮಿಶ್ರಾ ಹಾಗೂ ಅವರ ಸಹಚರ ಭಾನು ತಿವಾರಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಕಾರಿನೊಂದಿಗೆ ಎಸ್ಕೇಪ್ ಆಗಿದ್ದ. ಸದ್ಯ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.