alex Certify ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಹೊಲಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್: ಬಾಲಕಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಹೊಲಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್: ಬಾಲಕಿ ಗಂಭೀರ

ಮೈನ್‌ ಪುರಿ: ಉತ್ತರ ಪ್ರದೇಶದ ಮೈನ್‌ ಪುರಿಯಲ್ಲಿ ಆರು ಮಂದಿ ದುರುಳರು 12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ.

ಶುಕ್ರವಾರ ಈ ಘಟನೆ ನಡೆದಿದ್ದು, ಆರು ಮಂದಿ ಬಾಲಕಿಯನ್ನು ಅಪಹರಿಸಿ ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಘಟನೆ ನಡೆದಾಗ ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಳು. ಭಾರತೀಯ ದಂಡ ಸಂಹಿತೆ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 25-27 ವರ್ಷ ವಯಸ್ಸಿನ ಆರು ಮಂದಿಯ ವಿರುದ್ಧ ಬಾಲಕಿಯ ತಂದೆ ಎಫ್‌ಐಆರ್ ದಾಖಲಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಲ್ ಅಧಿಕಾರಿ ಚಂದ್ರಕೇಶ್ ಸಿಂಗ್ ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...