alex Certify BIG NEWS: ತಕ್ಷಣವೇ ಜಾರಿಗೆ ಬರುವಂತೆ ಬ್ಲಾಕ್, ಜಿಲ್ಲಾ, ರಾಜ್ಯ ಸೇರಿ ಸೇರಿ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ ಸಂಪೂರ್ಣ ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಕ್ಷಣವೇ ಜಾರಿಗೆ ಬರುವಂತೆ ಬ್ಲಾಕ್, ಜಿಲ್ಲಾ, ರಾಜ್ಯ ಸೇರಿ ಸೇರಿ ಉತ್ತರ ಪ್ರದೇಶ ಕಾಂಗ್ರೆಸ್ ಘಟಕ ಸಂಪೂರ್ಣ ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಎಐಸಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಉತ್ತರ ಪ್ರದೇಶದ ಜಿಲ್ಲಾ ಮತ್ತು ಬ್ಲಾಕ್ ಘಟಕಗಳೊಂದಿಗೆ ಸಂಪೂರ್ಣ ಪ್ರದೇಶ ಕಾಂಗ್ರೆಸ್ ಸಮಿತಿ(ಪಿಸಿಸಿ) ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದಾರೆ.

ಈ ನಿರ್ಧಾರವು ಪಕ್ಷದ ಉತ್ತರ ಪ್ರದೇಶ ಘಟಕವನ್ನು ಪುನರ್ರಚಿಸುವ ಮತ್ತು 2027 ರಲ್ಲಿ ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ಮಾಡುವ ಯೋಜನೆಯ ಭಾಗವಾಗಿದೆ ಎನ್ನಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇದನ್ನು ದೃಢಪಡಿಸಿದ್ದು, ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳೊಂದಿಗೆ ಪಿಸಿಸಿಯ ಸಂಪೂರ್ಣ ರಾಜ್ಯ ಘಟಕವನ್ನು ವಿಸರ್ಜಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಎಲ್ಲಾ ಸಮಿತಿಗಳು, ಉಪ ಸಮಿತಿಗಳು ಮತ್ತು ಜಿಲ್ಲಾ ಮಟ್ಟದ ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದ್ದು, ಎಲ್ಲಾ ಹಳೆಯ ಅಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿಶೇಷ ಉಸ್ತುವಾರಿ ಹೊಂದಿರುವ ನಾಯಕರು ಇನ್ನು ಮುಂದೆ ಈ ಹುದ್ದೆಗಳನ್ನು ಹೊಂದಿರುವುದಿಲ್ಲ.

2019 ಮತ್ತು 2024ರ ಲೋಕಸಭೆ ಚುನಾವಣೆ ಮತ್ತು 2022ರ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಸಾಧನೆ ನಿರಾಶಾದಾಯಕವಾಗಿತ್ತು. ಆದ್ದರಿಂದ, ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಮತ್ತೆ ಸಂಘಟಿಸಲು ಕ್ರಮ ಕೈಗೊಳ್ಳಲಾಗಿದೆ. ಈಗ, ಖರ್ಗೆಯವರ ನಾಯಕತ್ವದಲ್ಲಿ, ಯುವ ಮತ್ತು ತಳಮಟ್ಟದ ನಾಯಕರನ್ನು ತನ್ನ ತೆಕ್ಕೆಗೆ ತರಲು ಪ್ರಯತ್ನಿಸುತ್ತಿದೆ. ಹಳೆಯ ಸಮಿತಿಯನ್ನು ಬದಲಾಯಿಸಿ ಅದಕ್ಕೆ ಹೊಸ ಶಕ್ತಿ ತುಂಬುವುದು ಅಗತ್ಯ ಎಂಬುದು ಪಕ್ಷದ ನಾಯಕರ ಅಭಿಪ್ರಾಯವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...