ಹಿಂದೂ ದೇವತೆಗಳ ಚಿತ್ರಗಳಿರುವ ಕಾಗದದ ಮೇಲೆ ಕೋಳಿ ಮಾಂಸವನ್ನು ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ತಾಲಿಬ್ ಹುಸೇನ್ ಎಂಬಾತನ ಅಂಗಡಿಯಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದೆ ಎಂದು ಕೆಲವರು ನೀಡಿದ ದೂರಿನ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿದ್ದರು
ಪೊಲೀಸ್ ತಂಡವು ಅಂಗಡಿ ಬಳಿ ವಿಚಾರಣೆಗೆ ಬಂದಾಗ ಹುಸೇನ್ ಅವರನ್ನು ಕೊಲ್ಲುವ ಉದ್ದೇಶದಿಂದ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಎಫ್ಐಆರ್ನಲ್ಲಿ ಈ ಅಂಶ ದಾಖಲಾಗಿದೆ.
BIG BREAKING: ಪರಪ್ಪನ ಅಗ್ರಹಾರ ಜೈಲಧಿಕಾರಿ ರಂಗನಾಥ್ ಎತ್ತಂಗಡಿ
ಆತನ ವಿರುದ್ಧ ಕೊಲೆ ಪ್ರಯತ್ನ (307), ಐಪಿಸಿ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆ, ಧಾರ್ಮಿಕ ನಂಬಿಕೆಗಳನ್ನು ಕೆರಳಿಸುವ ಉದ್ದೇಶದಿಂದ ಕುಕೃತ್ಯ) ಪ್ರಕರಣ ದಾಖಲಿಸಲಾಗಿದೆ.