ಈ ವೇಳೆ ಮಾತನಾಡಿರುವ ಸಚಿವ ಚೌಧರಿ, ಪ್ರಕರಣವನ್ನು ತಕ್ಷಣ ಬಗೆಹರಿಸದಿದ್ದರೆ, ನಾನು ಚುನಾವಣೆಯನ್ನು ಬಿಟ್ಟು ಮಥುರಾದ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇನೆ. ಈಗ ಸಿಂಗ್ ಅವರ ಕುಟುಂಬದ ಜವಾಬ್ದಾರಿ ನನ್ನ ಮೇಲಿದೆ. ಸಿಂಗ್ ನನ್ನ ಮಗುವಿನಂತೆ. ನಾನು ಅವರಿಗೆ ಋಣಿಯಾಗಿರುತ್ತೇನೆ. ಅವರ ಸಾವಿಗೆ ನ್ಯಾಯ ಒದಗಿಸುವ ಮೂಲಕ ಅವರು ನನಗೆ ಮಾಡಿದ ಸಹಾಯಕ್ಕೆ ಮರುಪಾವತಿ ಮಾಡಲು ಪ್ರಯತ್ನಿಸುತ್ತೇನೆ. ಸಿಂಗ್ ಅವರು ಕಳೆದ ಹಲವಾರು ವರ್ಷಗಳಿಂದ ನನ್ನ ಚುನಾವಣಾ ಪ್ರಚಾರಕರಾಗಿದ್ದರು. ಇದು ನಿಜವಾಗಿಯೂ ನನ್ನ ಮೇಲಿನ ದಾಳಿಯಾಗಿದೆ ಎಂದು ಸಚಿವ ಚೌಧರಿ ಭಾವುಕರಾಗಿ ನುಡಿದಿದ್ದಾರೆ.
ಇನ್ನು, ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಾಳಿಕೋರರ ಸುಳಿವು ಪಡೆಯಲು ಕೃತ್ಯ ನಡೆದ ಸ್ಥಳದ ಎಲ್ಲಾ ಸಿಸಿ ಟಿವಿ ಕ್ಯಾಮೆರದ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಎಸ್‌ಎಸ್‌ಪಿ ಗೌರವ್ ಗ್ರೋವರ್ ತಿಳಿಸಿದ್ದಾರೆ.