ಲಖನೌ: ಉತ್ತರ ಪ್ರದೇಶದ ಲಖಿಂಪುರ ಕೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ.
ಲಖಿಂಪುರದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಸಚಿವರ ಪುತ್ರನ ಕಾರು ಹರಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದರು. ರೈತರಿಬ್ಬರು ಸಾವನ್ನಪ್ಪಿದ್ದ ಬೆನ್ನಲ್ಲೇ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿತ್ತು. ಘಟನೆಯಲ್ಲಿ ಓರ್ವ ಪತ್ರಕರ್ತ, ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರು ಸಾವನ್ನಪ್ಪಿದ್ದರು.
ಈ ಹೆಗ್ಗಳಿಕೆಗೆ ಪಾತ್ರವಾಗಲಿದೆ ಪ್ರಧಾನಿ ಮೋದಿ ಪ್ರತಿನಿಧಿಸುವ ʼವಾರಣಾಸಿʼ
ಇದೀಗ ಈ ಪ್ರಕರಣ ಸಂಬಂಧ ಆಶಿಶ್ ಮಿಶ್ರಾ ಹಾಗೂ ಹಲವರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಆದರೆ ಘಟನೆ ನಡೆದ ಸಂದರ್ಭದಲ್ಲಿ ನಾನು ಲಖಿಂಪುರದಲ್ಲಿಯೇ ಇರಲಿಲ್ಲ ಎಂದು ಆಶಿಶ್ ಸಮಜಾಯಿಷಿ ನೀಡಿದ್ದಾರೆ. ಇನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ, ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದ ವೇಳೆ ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಆತನ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ ರೈತ ಮುಖಂಡರು ರೈತರ ಮೇಲೆ ಹರಿದ ಕಾರಿನಲ್ಲಿ ಆಶಿಶ್ ಮಿಶ್ರಾ ಇದ್ದುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.
ಶಾರೂಕ್ ಪುತ್ರನ ಬಂಧನದ ಬಳಿಕ ವೈರಲ್ ಆಗಿದೆ ಈ ಫೋಟೋ…!
ಲಖಿಂಪುರಕ್ಕೆ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ್ದ ಸಚಿವರ ಬೆಂಗಾವಲು ವಾಹನ ಹಾಗೂ ಸಚಿವರ ಪುತ್ರ ಆಶಿಶ್ ಮಿಶ್ರಾ ಕಾರು ಪ್ರತಿಭಟನಾ ನಿರತ ರೈತರ ಮೇಲೆ ಹರಿದಿದ್ದು, ಓರ್ವ ರೈತ ಸ್ಥಳದಲ್ಲಿ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ರೈತ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು.