alex Certify ಸಿಎಂ ಯೋಗಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯೋಗಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದ್ದರಿಂದ, ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಅಸಂದ್ರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಧ್ಯಾನೇಂದ್ರ ಪ್ರತಾಪ್ ಸಿಂಗ್ ಅವರು ತಮ್ಮ ಕಚೇರಿಯ ಕೊಠಡಿಯಲ್ಲಿ ಯಾರೊಂದಿಗೋ ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ಯೋಗಿ ವಿರುದ್ಧ ಆಕ್ಷೇಪಾರ್ಹ ರೀತಿಯಲ್ಲಿ ಮಾತನ್ನಾಡಿದ್ದಾರೆ.

ಪತ್ರಕರ್ತರೊಬ್ಬರು ಈ ಸಂಭಾಷಣೆಯನ್ನು ಚಿತ್ರೀಕರಿಸಿ, ವಿಡಿಯೋವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಶಾಂಕ್ ಕುಶುಮೇಶ್ ಅವರಿಗೆ ರವಾನಿಸಿದ್ದಾರೆ. ಅವರು ಎರಡು ದಿನಗಳ ಹಿಂದೆ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ವತ್ಸ್ ಅವರಿಗೆ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ಪೊಲೀಸ್ ಅಧಿಕಾರಿ ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರದ ವಿರುದ್ಧ ದಂಗೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಶುಮೇಶ್ ಆರೋಪಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...