alex Certify ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ಮೇಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ಮೇಲ್

ಪ್ರತಾಪ್ ಗಢ: ಉತ್ತರಪ್ರದೇಶದ ಪ್ರತಾಪ್ ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಮಹಿಳಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಶುಕ್ರವಾರ ಶಹಜಾನ್ ಪುರ ಜಿಲ್ಲೆಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ರಾಮ್ ಅಧರ್ ತಿಳಿಸಿದ್ದಾರೆ. ಕೋಚಿಂಗ್ ಪಡೆಯುತ್ತಿದ್ದ ದಿನಗಳಲ್ಲಿ ಆರೋಪಿ ತನ್ನನ್ನು ಥಳಿಸಿ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ಅಧಿಕಾರಿ ಜನವರಿ 2 ರಂದು ಪೊಲೀಸರಿಗೆ ದೂರು ನೀಡಿದ್ದರು.

ಅಶ್ಲೀಲ ವಿಡಿಯೋ ಮಾಡಿಕೊಂಡಿದ್ದ ಆರೋಪಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಆಕೆಗೆ ಬರೇಲಿಯ ಬ್ಯಾಂಕ್ ನಲ್ಲಿ ಕೆಲಸ ಸಿಕ್ಕಾಗ ಆರೋಪಿಗಳು ಅಲ್ಲಿಗೆ ಬಂದು ಕಿರುಕುಳ ನೀಡುತ್ತಿದ್ದರು. 2017 ರಲ್ಲಿ ಪ್ರಾಂತೀಯ ನಾಗರಿಕ ಸೇವೆಗೆ ಆಯ್ಕೆಯಾದ ಅಧಿಕಾರಿ ಪ್ರತಾಪ್ ಗಢದಲ್ಲಿ ಕೆಲಸ ಮಾಡಿದ್ದಾರೆ. ಅಧಿಕಾರಿಗಳ ವಸತಿಗೃಹಕ್ಕೆ ಆರೋಪಿಗಳು ಬರುತ್ತಿದ್ದರು. ಆರೋಪಿ ತನ್ನ ಇಬ್ಬರು ಸಹಚರರೊಂದಿಗೆ ಕಳೆದ ವರ್ಷ ಡಿಸೆಂಬರ್ 18 ರಂದು ಬಂದು ಬ್ಲಾಕ್ ಮೇಲ್ ಮಾಡಿದ್ದ ಎಂದು ಮಹಿಳಾ ಅಧಿಕಾರಿ ದೂರು ನೀಡಿರುವುದಾಗಿ ರಾಮ್ ಅಧರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...