ಕೊರೊನಾ ಮೂರನೇ ಅಲೆಯ ಆತಂಕದ ನಡುವೆಯೇ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಡೆಂಗ್ಯೂ ಕಾಟ ಜೋರಾಗಿದೆ. ಜಿಲ್ಲೆಯಲ್ಲಿ ವೈರಲ್ ಜ್ವರ ಹಾಗೂ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.
ಮೆಡಿಕಲ್ ಕಾಲೇಜಿನಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಬಳಿಕ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಡೆಂಗ್ಯೂವಿನಿಂದ ಕಳೆದ 24 ಗಂಟೆಗಳಲ್ಲಿ 154 ರೋಗಿಗಳು ದಾಖಲಾಗಿದ್ದಾರೆ ಎಂದು ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಡಾ. ಸಂಗೀತಾ ಅನೆಜಾ ಮಾಹಿತಿ ನೀಡಿದ್ದಾರೆ.
ಡಾ. ಸಂಗೀತಾ ಅನೆಜಾ ನೀಡಿರುವ ಮಾಹಿತಿಯ ಪ್ರಕಾರ ಮೆಡಿಕಲ್ ಕಾಲೇಜಿನ ವಿವಿಧ ವಾರ್ಡ್ಗಳಲ್ಲಿ ಒಟ್ಟು 255 ರೋಗಿಗಳು ದಾಖಲಾಗಿದ್ದಾರೆ. 153 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದ್ರು.
ಈ ನಡುವೆ ಡೆಂಗ್ಯೂವಿನಿಂದ ಮೃತಪಟ್ಟ 12 ವರ್ಷದ ಬಾಲಕಿಯ ಸಹೋದರ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ನನ್ನ ಸಹೋದರಿ ಸಾವನ್ನಪ್ಪಿದ್ದಾಳೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.