alex Certify ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ….! ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ….! ಹೆಚ್ಚಿದ ಆತಂಕ

ಕೊರೊನಾ ಮೂರನೇ ಅಲೆಯ ಆತಂಕದ ನಡುವೆಯೇ ಉತ್ತರ ಪ್ರದೇಶದ ಫಿರೋಜಾಬಾದ್​ ಜಿಲ್ಲೆಯಲ್ಲಿ ಡೆಂಗ್ಯೂ ಕಾಟ ಜೋರಾಗಿದೆ. ಜಿಲ್ಲೆಯಲ್ಲಿ ವೈರಲ್​ ಜ್ವರ ಹಾಗೂ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ಮೆಡಿಕಲ್​ ಕಾಲೇಜಿನಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಬಳಿಕ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಡೆಂಗ್ಯೂವಿನಿಂದ ಕಳೆದ 24 ಗಂಟೆಗಳಲ್ಲಿ 154 ರೋಗಿಗಳು ದಾಖಲಾಗಿದ್ದಾರೆ ಎಂದು ಮೆಡಿಕಲ್​ ಕಾಲೇಜಿನ ಪ್ರಾಂಶುಪಾಲೆ ಡಾ. ಸಂಗೀತಾ ಅನೆಜಾ ಮಾಹಿತಿ ನೀಡಿದ್ದಾರೆ.

ಡಾ. ಸಂಗೀತಾ ಅನೆಜಾ ನೀಡಿರುವ ಮಾಹಿತಿಯ ಪ್ರಕಾರ ಮೆಡಿಕಲ್​ ಕಾಲೇಜಿನ ವಿವಿಧ ವಾರ್ಡ್​ಗಳಲ್ಲಿ ಒಟ್ಟು 255 ರೋಗಿಗಳು ದಾಖಲಾಗಿದ್ದಾರೆ. 153 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದ್ರು.

ಈ ನಡುವೆ ಡೆಂಗ್ಯೂವಿನಿಂದ ಮೃತಪಟ್ಟ 12 ವರ್ಷದ ಬಾಲಕಿಯ ಸಹೋದರ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ನನ್ನ ಸಹೋದರಿ ಸಾವನ್ನಪ್ಪಿದ್ದಾಳೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...