
ಕಾರವಾರ: ಗುಜರಿ ಸಾಮಾನುಗಳನ್ನಿಟ್ಟಿದ್ದ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ, ಲಾರಿ ಸಮೇತ ಅಪಾರ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ.
ಮಧ್ಯಾಹ್ನದ ಬಿಸಿಲಧಗೆ ವೇಳೆಯೇ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗದ್ಧಗನೆ ಹೊತ್ತಿ ಉರಿದಿದೆ. ಮುಗಿಲೆತರಕ್ಕೆ ಬೆಂಕಿಯ ಜ್ವಾಲೆ ಆವರಿಸಿದೆ. ಗೋಡೌನ್ ಪಕ್ಕದಲ್ಲಿಯೇ ಇದ್ದ ಲಾರಿ ಕೂಡ ಬೆಂಕಿಗಾಹುತಿಯಾಗಿದೆ.
ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ