
ಕಾರವಾರ: ಕಾರಿನಲ್ಲಿ ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಸಸ್ಪೆಂಡ್ ಮಾಡಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ.
ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಸಂತೋಷ್ ಲಮಾಣಿ ಅಮಾನತುಗೊಂಡವರು. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ತಪಾಸಣೆ ನಡೆಸಿದ ಅಂಕೋಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.
ಶ್ರೀರಂಗಪುರದ ಪಾಂಡವಪುರ ಮೂಲದ ದಿವಾಕರ್ ಈರಯ್ಯ ಹಾಗೂ ಮದೇವ ಬಂಧಿತ ಆರೋಪಿಗಳು. ಕಾರು ತಪಾಸಣೆ ವೇಳೆ 80,905 ರೂ ಮೌಲ್ಯದ ಗೋವಾ ಮದ್ಯ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳು ಅಕ್ರಮ ಮದ್ಯ ಸಾಗಾಟ ಪ್ರಕರಣದಲ್ಲಿ ಹಳಿಯಾಳ ಠಾಣೆಯ ಹೆಡ್ ಕಾನ್ಸ್ ಟೇಬಲ್ ಹೆಸರು ಬಾಯ್ಬಿಟ್ಟಿದ್ದರು. ಇದೀಗ ಈ ಪ್ರಕರಣದಲ್ಲಿ ಹೆಡ್ ಕಾನ್ಸ್ ಟೇಬಲ್ ಅವರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾ ಎಸ್ ಪಿ ಎಂ.ನಾರಾಯಣ ಆದೇಶ ಹೊರಡಿಸಿದ್ದಾರೆ.