
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಮುಂದಿನ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಉತ್ತರ ಕನ್ನಡ ಜಿಲ್ಲೆಯ 9 ಸ್ಥಳಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಸಾವಂತವಾಡಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಿಲ್ಲೆಯ ಜನರು ಮೂರು ದಿನಗಳ ಕಾಲ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು. ಮಧ್ಯಾಹ್ನದ ವೇಳೆ ಮನೆಯಿಂದ ಹೊರಹೋಗಬೇಡಿ ಎಂದು ಮನವಿ ಮಾಡಿದ್ದಾರೆ.
ಬಿಸಿಲ ಝಳ ಅಥವಾ ಯಾವುದೇ ಸಮಸ್ಯೆ ಉಂಟಾದಲ್ಲಿ 1077 ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.