alex Certify BREAKING: ಭಾರಿ ಮಳೆಗೆ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾರಿ ಮಳೆಗೆ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಗುಡ್ಡ ಕುಸಿತ ಸಂಭವಿಸಿ ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದೆ. 9 ಜನರು ನಾಪತ್ತೆಯಾಗಿದ್ದು ಮಣ್ಣಿನಡಿ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ಗುಡ್ಡ ಕುಸಿತದ ವೇಳೆ ಎಲ್ ಪಿಜಿ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಉರುಳಿ ಬಿದ್ದಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...