ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣಾರ್ಭಟ ಮತ್ತೆ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ನಲ್ ಹಿಲ್ ಬಳಿ ರಸ್ತೆಯ ಮೇಲೆ ಗುಡ್ಡ ಕುಸಿದಿದ್ದು, ಬೃಹತ್ ಬಂಡೆಗಳು, ಮಣ್ಣು ರಸ್ತೆ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಟ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ. ಕಾರವಾರದಿಂದ ಹೊನ್ನಾವರಕ್ಕೆ ಹೋಗುವ ರಸ್ತೆಯಲ್ಲಿ ಮಣ್ಣು ಕುಸಿದಿದ್ದು, ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪೊಲೀಸರು ಈ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.