ಇತ್ತೀಚಿನ ದಿನಗಳಲ್ಲಿ ದೇಶದ ಹಲವೆಡೆಗಳಲ್ಲಿ ರೈಲು ಹಳಿ ತಪ್ಪಿಸಲು ನಡೆಸುತ್ತಿರುವ ಹಲವಾರು ಪ್ರಯತ್ನಗಳು ಕಂಡುಬರುತ್ತಿವೆ. ಉತ್ತರಪ್ರದೇಶದಲ್ಲಿ ರೈಲು ಹಳಿಗಳ ಮೇಲೆ ಮಣ್ಣು ಸುರಿದು ಟ್ರ್ಯಾಕ್ ಮುಚ್ಚಿ ಕಿಡಿಗೆಡಿಗಳು ಹುಚ್ಚಾಟ ಮೆರೆದಿದ್ದಾರೆ.
ಲೋಕೋ ಪೈಲೆಟ್ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ. ರಘುರಾಜ್ ಸಿಂಗ್ ಶಟಲ್ ರೈಲು ತೆರಳುತ್ತಿದ್ದ ವೇಳೆ ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಇರುವುದು ಕಂಡು ಲೋಕೋ ಪೈಲಟ್ ತಕ್ಷಣ ಬ್ರೇಕ್ ಹಾಕಿ ರೈಲು ನಿಲ್ಲಿಸಿದ್ದಾರೆ.
ಗಂಗಾ ಎಕ್ಸ್ ಪ್ರೆಸ್ ವೇನಲ್ಲಿ ಮಣ್ಣುತುಂಬುವ ಕೆಲಸದಲ್ಲಿ ತೊಡಗಿದ್ದ ಡಂಪರ್ ಪತ್ತೆಯಾಗಿದೆ. ರೈಲ್ವೆ ಹಳಿಗಳ ಮೇಲೆಯೇ ಲೋಡೆಡ್ ಡಂಪರ್ ಹಾಗೂ ಮಣ್ಣು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸದ್ಯ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಘಟನೆಯ ಹಿಂದಿನ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.