alex Certify BREAKING : ಉತ್ತರಾಖಂಡ್ ನಲ್ಲಿ ಘೋರ ದುರಂತ : ಟ್ರಾನ್ಸ್ ಫಾರ್ಮರ್ ಸ್ಟೋಟಗೊಂಡು 10 ಮಂದಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉತ್ತರಾಖಂಡ್ ನಲ್ಲಿ ಘೋರ ದುರಂತ : ಟ್ರಾನ್ಸ್ ಫಾರ್ಮರ್ ಸ್ಟೋಟಗೊಂಡು 10 ಮಂದಿ ಸ್ಥಳದಲ್ಲೇ ಸಾವು

ಚಮೋಲಿ : ಉತ್ತರಾಖಂಡ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ ಇಂದು ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಸಂತ್ರಸ್ತರು ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಮೋಲಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಂದ್ರ ದೋವಲ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...