alex Certify BREAKING NEWS: ಅಲಕನಂದಾ ನದಿಗೆ ಉರುಳಿಬಿದ್ದ ಟಿಟಿ ವಾಹನ; 10 ಪ್ರಯಾಣಿಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಲಕನಂದಾ ನದಿಗೆ ಉರುಳಿಬಿದ್ದ ಟಿಟಿ ವಾಹನ; 10 ಪ್ರಯಾಣಿಕರು ದುರ್ಮರಣ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಫೋ ಟ್ರಾವೆಲರ್ ಒಂದು ರುದ್ರಪ್ರಯಾಗ ಜಿಲ್ಲೆಯ ರೈತೋಲಿ ಬಳಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ರುಷಿಕೇಶ-ಭದ್ರಿನಾಥ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, 23 ಪ್ರಯಾಣಿಕರಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಉರುಳಿ ಬಿದ್ದಿದೆ. ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದಾರೆ.

7 ಜನರು ಗಂಭೀರವಾಗಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...