ಡೆಹ್ರಾಡೂನ್: ಇಂಧನ ಬೆಲೆ ಏರಿಕೆ ನಡುವೆ ಉತ್ತರಾಖಂಡ ಸರ್ಕಾರದಿಂದ ಪ್ರಮುಖ ಘೋಷಣೆ ಹೊರಬಿದ್ದಿದೆ. ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ವರ್ಷ ಮೂರು ಎಲ್.ಪಿ.ಜಿ. ಸಿಲಿಂಡರ್ ಗಳನ್ನು ಉಚಿತವಾಗಿ ನೀಡುವುದಾಗಿ ಹೇಳಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಚಿತ ಅಡುಗೆ ಅನಿಲ ಸಿಲಿಂಡರ್ ಗಳನ್ನು ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಮುಖ್ಯ ಕಾರ್ಯದರ್ಶಿ ಎಸ್.ಎಸ್. ಸಂಧು, ಒಟ್ಟು 1,84,142 ಅಂತ್ಯೋದಯ ಕಾರ್ಡ್ ಹೊಂದಿರುವವರು ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಇದಕ್ಕೆ ವಿರೋಧಿಸಿದ್ದು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಬಿಜೆಪಿಯ ಅಭ್ಯರ್ಥಿಯಾಗಿರುವ ಚಂಪಾವತ್ ವಿಧಾನಸಭಾ ಉಪಚುನಾವಣೆಯು ಮೇ 31 ರಂದು ನಡೆಯಲಿದೆ ಎಂದು ಘೋಷಿಸಿದ ನಂತರ ಇಂತಹ ಆದೇಶ ಜಾರಿಗೆ ಬಂದಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರಿದೆ.