alex Certify BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿ; ಮಹತ್ವದ ಘೋಷಣೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿ; ಮಹತ್ವದ ಘೋಷಣೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಚುನಾವಣೆ ಭರವಸೆ ಈಡೇರಿಕೆಯತ್ತ ಉತ್ತರಾಖಂಡ್ ಸಿಎಂ ಧಾಮಿ ಮಹತ್ವದ ಹೆಜ್ಜೆ ಇಟ್ಟಿದ್ದು, ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಮೊದಲ ಸಂಪುಟ ಸಭೆಯಲ್ಲೇ ಈ ಬಗ್ಗೆ ಸಮಿತಿ ರಚನೆ ನಿರ್ಧಾರ ಕೈಗೊಳ್ಳಲಾಗಿದೆ.

ಜನರು ಒಳಪಡುವ ಧರ್ಮ, ಜಾತಿ ಮತ್ತು ಜನಾಂಗ ಬುಡಕಟ್ಟುಗಳ ಹೊರತಾಗಿ ಏಕರೂಪ ನಾಗರಿಕ ಸಂಹಿತೆ ಎಲ್ಲರಿಗೂ ಅನ್ವಯವಾಗುತ್ತದೆ. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರೈಸ್ತರಿಗೆ ಮದುವೆ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಮೊದಲಾದವುಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕಾಯ್ದೆಗಳಿದ್ದು, ಇದನ್ನು ತೆಗೆದು ಎಲ್ಲ ಧರ್ಮದವರಿಗೂ ಒಂದೇ ನಿಯಮ ರೂಪಿಸಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುತ್ತದೆ.

1961 ರಲ್ಲಿ ಗೋವಾ ಭಾರತಕ್ಕೆ ಹಸ್ತಾಂತರವಾದ ಸಂದರ್ಭದಲ್ಲಿ ಪೋರ್ಚುಗೀಸ್ ಆಡಳಿತದಲ್ಲಿ ಜಾರಿಯಲ್ಲಿದ್ದ ಈ ಕಾನೂನನ್ನು ಗೋವಾದಲ್ಲಿ ಹಾಗೆಯೇ ಮುಂದುವರೆಸಿಕೊಂಡು ಬರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...