
ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಲು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಉತ್ತರಾಖಂಡ್ನ ಯಮುನೋತ್ರಿಗೆ ತೆರಳಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಶಿವರಾಜ್ ಸಿಂಗ್ ಚೌಹಾಣ್ ಇದ್ದ ಹೆಲಿಕಾಪ್ಟ್ ಟೇಕಾಫ್ ಆಗದ ಕಾರಣ ಹೆಲಿಕಾಪ್ಟರ್ನಲ್ಲಿಯೇ ಕುಳಿತುಕೊಳ್ಳಬೇಕಾಯ್ತು.
ನಿಗದಿತ ಸಮಯಕ್ಕೆ ಸ್ಥಳವನ್ನು ತಲುಪಲು ಸಾಧ್ಯವಾಗದ ಕಾರಣ ಅವರು ದೂರವಾಣಿ ಕರೆ ಮೂಲಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.
ಯಾವುದೇ ರಾಜಕೀಯ ನಾಯಕರು ಹೆಲಿಕಾಪ್ಟರ್ನಲ್ಲಿ ಕುಳಿತು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದು ಭಾರತದ ಚುನಾವಣಾ ಇತಿಹಾಸದಲ್ಲಿಯೇ ಇದೆ ಮೊದಲಾಗಿದೆ.
ಉತ್ತರಾಖಂಡ ವಿಧಾನಸಭೆ ಚುನಾವಣೆ 2022 ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.