
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಹಿಮಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. ಘಟನಾ ಸ್ಥಳದಲ್ಲಿ ಮತ್ತೋರ್ವ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ. ಈ ಮುಲಕ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಉತ್ತರಾಖಂಡದ ಚಮೋಲಿ ಬಳಿ ಹೆದ್ದಾರಿ ಕಾಮಗಾರಿ ವೇಳೆ ಭಾರಿ ಹಿಮಪಾತ ಸಂಭವಿಸಿ, ಹಿಮದ ಅಡಿಯಲ್ಲಿ 55 ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ 50 ಕಾರ್ಮಿಕರನ್ನು ರಕ್ಷಿಸಿ ಜೋಶಿಮಠದ ಬಳಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಉಳಿದ ಐವರಿಗಾಗಿ ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿತ್ತು.
ಹಿಮಕುಸಿತವಾಗಿದ್ದ ಸ್ಥಳದಲ್ಲಿ ಓರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಇನ್ನೋರ್ವನನ್ನು ರಕ್ಷಿಸಲಾಗಿದೆ. ಉಳಿದ ಮೂವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ವಿಶೇಷ ರೆಕೊ ರಾಡಾರ್ ಗಳು, ಡ್ರೋನ್, ಹಿಮಪಾತ ರಕ್ಷಣಾ ಶ್ವಾನಗಳನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ.