
ಉತ್ತರಾಖಂಡದ ಬದರಿನಾಥದಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರ ಮೇಲೆ ಹಿಮಪರ್ವತ ಕುಸಿದು ಬಿದ್ದ ಪರಿಣಾಮ 50 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಾನಾ ಮತ್ತು ಘಸ್ಟೋರಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಹಿಮದಡಿ 50 ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಉತ್ತರಾಖಂದದಾದ್ಯಂತ ಭಾರಿ ಹಿಮಮಳೆ ಸುರಿಯುತ್ತಿದ್ದು, ಹಿಮಪಾತದಿಂದಾಗಿ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯುಂಟಾಗಿದೆ.