
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆಯೇ ಹಿಮದ ಬೆಟ್ಟ ಕುಸಿದು ಬಿದ್ದಿದ್ದು, 50 ಕಾರ್ಮಿಕರು ಹಿಮದ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮಾನಾ ಮತ್ತು ಘಸ್ಟೋರಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಹಿಮ ಪರ್ವತ ಕುಸಿದು ಬಿದ್ದಿದೆ. ಅವಶೇಷಗಳಡಿ 50 ಕಾರ್ಮಿಕರು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.
ಇತ್ತೀಚಿನ ಮಾಹಿತಿ ಪ್ರಕರಾ ಹಿಮದ ಅಡಿಯಲ್ಲಿ ಸಿಲುಕಿಕೊಂಡಿದ್ದ 10 ಕಾರ್ಮಿಕರನ್ನು ರಕ್ಷಿಸಲಾಗಿದೆ. ಉಳಿದವರ ರಕ್ಷಣೆಗೆ ಕಾರ್ಯಾಚಾರಣೆ ಮುಂದುವರೆದಿದೆ.