
ಲಖನೌ: ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಹೆದ್ದಾರಿಯಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲಿ ನಡೆದಿದೆ.
ರಾಘವೇಂದ್ರ ಬಾಜಪೈ (35) ಕೊಲೆಯಾಗಿರುವ ಪತ್ರಕರ್ತ. ಲಖನೌ-ದೆಹಲಿ ಹೆದ್ದಾರಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ರಾಘವೇಂದ್ರ ಅವರನ್ನು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮೊದಲು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮೂರು ಸುತ್ತು ಗುಂಡು ಹಾರಿಸಿದ್ದರೆ. ಮೂರು ಗುಂಡುಗಳು ಪತ್ರಕರ್ತ ರಾಘವೇಂದ್ರ ಅವರ ದೇಹಕ್ಕೆ ಹೊಕ್ಕಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ರಾಘವೇಂದ್ರ ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರರಾಗಿದ್ದರು. ಅಲ್ಲದೇ ಆರ್ ಟಿಐ ಕಾರ್ಯಕರ್ತರಾಗಿದ್ದರು.
ಆರೋಪಿಗಳ ಬಂಧನಕ್ಕಾಗಿ ಪೊಲೀಸರು ನಾಲ್ಕು ತಂಡ ರಚಿಸಿದ್ದಾರೆ ಎಂದು ತಿಳಿದುಬಂದಿದೆ.