alex Certify ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ

ಉತ್ತರಕಾಶಿ: ಉತ್ತರಾಖಂಡ್ ನಲ್ಲಿ ಚಾರ್ ಧಾಮ್ ಯಾತ್ರಿಕರು ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಡಮ್ಟಾದಲ್ಲಿ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದಿದ್ದು, ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆ ನಡೆದ ಕೂಡಲೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದುವರೆಗೆ 26 ಮಂದಿ ದುರಂತದಲ್ಲಿ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾರ್ಯಾಚರಣೆ ಮುಕ್ತಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಸ್ ನಲ್ಲಿ 28 ಯಾತ್ರಾರ್ಥಿಗಳು ಸೇರಿದಂತೆ ಒಟ್ಟು 30 ಮಂದಿ ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...