ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪೋವನ ಸುರಂಗದ ಬಳಿ ಇಂದು 12 ಮೃತದೇಹಗಳು ಪತ್ತೆಯಾಗಿವೆ.
ಇದರೊಂದಿಗೆ ಹಿಮಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ. ಇಂದು ಶೋಧ ಕಾರ್ಯಾಚರಣೆ ವೇಳೆ 12 ಮೃತದೇಹಗಳು ಪತ್ತೆಯಾಗಿವೆ. ಇದುವರೆಗೆ 50 ಮತಗಳನ್ನು ಹೊರತೆಗೆಯಲಾಗಿದ್ದು ನಾಪತ್ತೆಯಾದವರಿಗಾಗಿ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ.
ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ಸಿಬ್ಬಂದಿ ಉತ್ತರಾಖಂಡ್ ಪೊಲೀಸರು ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೆ 50 ಮೃತದೇಹ ಪತ್ತೆಯಾಗಿದ್ದು, 144 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.