ಬೆಂಗಳೂರು: ರಾಜ್ಯ ಸರ್ಕಾರದ ನೆರವು ಇಲ್ಲದಿದ್ದರೂ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಲೆವೆಲ್ ಕ್ರಾಸಿಂಗ್ ಗಳಲ್ಲಿ ಕೆಳ, ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ.
ಸೋಮವಾರ ಯಲಹಂಕದ ರೈಲ್ವೆ ಗಾಲಿ ಕಾರ್ಖಾನೆಯ ಕಾರ್ಯವೈಖರಿ ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರೈಲ್ವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪಾಲಿನ ಮೊತ್ತ 11,000 ಕೋಟಿ ರೂ.ಗಳನ್ನು ರೈಲ್ವೆ ಇಲಾಖೆಗೆ ಪಾವತಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅದರ ಪಾಲಿನ ಹಣ ಪಾವತಿಯಾಗಿಲ್ಲ. ಆದರೂ, ರೈಲ್ವೆ ಇಲಾಖೆ ರಾಜ್ಯದಲ್ಲಿ ಉತ್ತಮ ಸೇವೆ ನೀಡುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ನೆರವು ಇಲ್ಲದಿದ್ದರೂ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕ್ರಾಸಿಂಗ್ ಗಳಲ್ಲಿ ಕೆಳ ಮತ್ತು ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.