ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಅರುಣ್ ಸೋಮಣ್ಣ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ ಮೇರೆಗೆ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
ವಸತಿ ಇಲಾಖೆ ಸಚಿವ ವಿ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಗುಬ್ಬಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸಚಿವ ಸೋಮಣ್ಣ ಅವರ ಅಸಮಾಧಾನ ಶಮನಗೊಳಿಸಲು ಅರುಣ್ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎನ್ನಲಾಗಿದೆ.