alex Certify ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ ಅಸಮಾಧಾನ ಹೊರ ಹಾಕಿದ ಸೋಮಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ ಅಸಮಾಧಾನ ಹೊರ ಹಾಕಿದ ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಆದರೆ, ಯಾತ್ರೆಯ ಮೊದಲ ತಂಡದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕಾರ್ಯಕ್ರಮದಿಂದ ದೂರ ಉಳಿದು ಅಸಮಾಧಾನ ಹೊರಹಾಕಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಬಂದರೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಭಾಗವಹಿಸಿಲ್ಲ. ವಿಜಯ ಸಂಕಲ್ಪ ಯಾತ್ರೆಯ ತಂಡದಲ್ಲಿಯೂ ಸೋಮಣ್ಣ ಅವರಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ರಥಯಾತ್ರೆ ತಂಡದ ನೇತೃತ್ವವನ್ನು ತಮಗೆ ನೀಡಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮತ್ತು ಕ್ಷೇತ್ರದ ಆಯ್ಕೆ ವಿಚಾರದಲ್ಲಿ ತಮ್ಮ ಬೇಡಿಕೆಗೆ ಪಕ್ಷದ ನಾಯಕರು ಸ್ಪಂದಿಸಿಲ್ಲ. ಚಾಮರಾಜನಗರ ಜಿಲ್ಲೆಗೆ ಅನೇಕ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮನವಿ ಮಾಡಿದ್ದರೂ ಬಜೆಟ್ ನಲ್ಲಿ ಸ್ಪಂದನೆ ದೊರೆತಿಲ್ಲ. ತಮ್ಮ ಪುತ್ರನಿಗೆ ಟಿಕೆಟ್ ಕೊಡುವಂತೆ ಬೇಡಿಕೆ ಇಟ್ಟರೂ ನಾಯಕರು ಒಪ್ಪಿಲ್ಲ. ಈ ಹಿನ್ನೆಲೆಯಲ್ಲಿ ಸೋಮಣ್ಣ ಅಸಮಾಧಾನಗೊಂಡಿದ್ದು, ವಿಜಯ ಸಂಕಲ್ಪ ಯಾತ್ರೆಯಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...