alex Certify ಸ್ವಂತ ಸೂರು ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 4 ಲಕ್ಷ ಮನೆ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಸೂರು ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 4 ಲಕ್ಷ ಮನೆ ಮಂಜೂರು

ದಾವಣಗೆರೆ: ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 4 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರು ಮಾಡಲಾಗುವುದು, ಜಾತಿ ಬೇಧವಿಲ್ಲದೆ ಅರ್ಹರಿಗೆ ಮಾತ್ರ ಮನೆ ಮಂಜೂರಾತಿಗೆ ಫಲಾನುಭವಿಗಳನ್ನು ಗುರುತಿಸುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ವಿ. ಸೋಮಣ್ಣ ಅವರು ಶಾಸಕರಿಗೆ ಮನವಿ ಮಾಡಿದರು.

ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ತಲಾ 20 ಮನೆಗಳನ್ನು ಮಂಜೂರು ಮಾಡಲಾಗಿತ್ತು.  ಈ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 04 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 40 ರಿಂದ 50 ಮನೆಗಳನ್ನು ಮಂಜೂರು ಮಾಡಲಾಗುವುದು.  ಜಾತಿ ವರ್ಗಗಳ ಬೇಧವಿಲ್ಲದೆ, ಸೂರು ರಹಿತ ಹಾಗೂ ಅವಶ್ಯಕತೆ ಇರುವಂತಹ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ.

ಈಗಾಗಲೆ ಬೇರೆ ಯೋಜನೆಯಡಿ ಆಯ್ಕೆಯಾದಂತಹವರಿಗೆ, ಅಥವಾ ಅವಶ್ಯಕತೆ ಇಲ್ಲದವರಿಗೆ ಮನೆ ನೀಡಬಾರದು.  ಪಾರದರ್ಶಕತೆಗೆ ಯಾವುದೇ ಅಪಚಾರವಾಗದ ರೀತಿಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.  ಈ ಬಗ್ಗೆ ಆಯಾ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು ಎಂದರು.

ಅಮೃತ ಯೋಜನೆಯಡಿ 750 ಗ್ರಾ.ಪಂ.ಗಳು ಮೇಲ್ದರ್ಜೆಗೇರಿಕೆ : ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಅಮೃತ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಅಮೃತ ಯೋಜನೆಯಡಿ ರಾಜ್ಯದ 750 ಗ್ರಾಮ ಪಂಚಾಯತ್‍ಗಳಿಗೆ ವಸತಿ, ನೀರು, ವಿದ್ಯುತ್, ರಸ್ತೆ ಸೇರಿದಂತೆ ವಿವಿಧ ಮೂಲ ಸೌಲಭ್ಯ ಕಲ್ಪಿಸಿ, ಮೇಲ್ದರ್ಜೆಗೇರಿಸಲು ನಿರ್ಧರಿಸಿ ಯೋಜನೆ ಜಾರಿಗೊಳಿಸಿದ್ದಾರೆ.  ಇಂತಹ ಗ್ರಾಮಗಳಲ್ಲಿ ಸೂರಿಲ್ಲದವರಿಗೆ ಮನೆ, ಶಾಲೆಗಳು, ಕುಡಿಯುವ ನೀರು ಪೂರೈಕೆ, ನರ್ಸರಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿ ಪರ್ವವನ್ನು ಕೈಗೊಳ್ಳಲಿದ್ದಾರೆ.  ಕಳೆದ 25 ವರ್ಷಗಳಲ್ಲಿ ಆಗದಂತಹ ಅಭಿವೃದ್ಧಿ ಕಾರ್ಯ ಈ ಯೋಜನೆಯಡಿ ಆಗಲಿದ್ದು, ಅರ್ಹರನ್ನು ಗುರುತಿಸಿ, ಮನೆ ಮಂಜೂರು ಮಾಡಲಾಗುವುದು.  750 ಗ್ರಾಮ ಪಂಚಾಯತಿಗಳಿಗೂ ಕ್ರಿಯಾ ಯೋಜನೆ ರೂಪಿಸಿ, ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...