ಬೆಂಗಳೂರು: ಮಾರ್ಚ್ 21 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 2360 ರಾಜ್ಯದ ವಿವಿಧತೆ 7,746 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
8381 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿ 5.24.426 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ 5000 ಕೋಟಿ ರೂ. ಗಿಂತ ಹೆಚ್ಚಿನ ಅನುದಾನ ನೀಡಿದ್ದು, ಎರಡು ಲಕ್ಷ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮನೆ ನೀಡಲಾಗಿದೆ. ಈ ತಿಂಗಳ ಅಂತ್ಯಕ್ಕೆ 7 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದರು.
ಮಾರ್ಚ್ 21ರಂದು ಬೆಂಗಳೂರಿನ ಯಲಹಂಕ, ಗೋವಿಂದರಾಜ ನಗರ, ಮುದ್ದಯ್ಯನಪಾಳ್ಯ, ಆನೇಕಲ್, ಕೆಆರ್ ಪುರಂ ಹಾಗೂ ಶಹಾಪುರ, ಚಿತ್ತಾಪುರ, ಹುಬ್ಬಳ್ಳಿ, ಉಡುಪಿ, ಶಿರಾ, ಬಂಗಾರಪೇಟೆ, ಮಂಡ್ಯ ಮೊದಲಾದ ಕಡೆಗಳಲ್ಲಿ ಮನೆಗಳ ಹಸ್ತಾಂತರ ನಡೆಯಲಿದೆ ಎಂದು ತಿಳಿಸಿದ್ದಾರೆ.