ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಲಕ್ಷ ಮನೆ ನಿರ್ಮಿಸುವ ಯೋಜನೆ ಕೈಗೊಳ್ಳಲಾಗಿದೆ. ಡಿಸೆಂಬರ್ ಒಳಗೆ ಮತ್ತಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಮಂಡಕಳ್ಳಿಯಲ್ಲಿ 2446 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಾಣಕ್ಕೆ 170 ಕೋಟಿ ರೂ.ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ 5000 ಮನೆಗಳನ್ನು ನಿರ್ಮಿಸಲಾಗಿದೆ. ವಸತಿ ಇಲಾಖೆ ಬಡವರಿಗಾಗಿ ಇರುವ ಇಲಾಖೆಯಾಗಿದ್ದು, ಬಡವರಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಮಂಗಳಮುಖಿಯರಿಗೆ ದೇಶದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಮನೆ ನಿರ್ಮಿಸಿಕೊಟ್ಟು ಸೂರು ಕಲ್ಪಿಸಿಕೊಡುತ್ತಿದೆ ಎಂದು ಸೋಮಣ್ಣ ತಿಳಿಸಿದ್ದಾರೆ.