alex Certify ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: 3.5 ಲಕ್ಷ ಸಬ್ಸಿಡಿ, ಸುಲಭ ದರದಲ್ಲಿ ಸಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: 3.5 ಲಕ್ಷ ಸಬ್ಸಿಡಿ, ಸುಲಭ ದರದಲ್ಲಿ ಸಾಲ

ಬೆಂಗಳೂರು: ರಾಜ್ಯದಲ್ಲಿ 3.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಬಡವರಿಗೆ ವಸತಿಗೆ ಶೇಕಡ 6 ರಷ್ಟು ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇದನ್ನು ಶೇಕಡ 5 ಕ್ಕೆ ಇಳಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಕರ್ನಾಟಕ ಗೃಹಮಂಡಳಿ ಮತ್ತು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ವಸತಿ ಕಲ್ಪಿಸಲಾಗುವುದು. ಬ್ಯಾಂಕ್ ಮೂಲಕ ಶೇ. 6 ಬಡ್ಡಿದರದಲ್ಲಿ 2.25 ಲಕ್ಷ ರೂ ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ವಿವಿಧ ಬ್ಯಾಂಕ್ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಸ್ಸಿಎಸ್ಟಿ ವರ್ಗದವರಿಗೆ 3.5 ಲಕ್ಷ ರೂ., ಇತರೆ ವರ್ಗದವರಿಗೆ 2 ಲಕ್ಷರೂ ಗಳನ್ನು ಸರ್ಕಾರ ಸಬ್ಸಿಡಿ ರೂಪದಲ್ಲಿ ನೀಡಲಿದ್ದು, ಉಳಿದ 2.25 ಲಕ್ಷ ರೂಪಾಯಿಯನ್ನು ಬ್ಯಾಂಕುಗಳಿಂದ ಸಾಲ ಕೊಡಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...