ಮಂಡ್ಯ: ಸ್ವಾತಂತ್ರ್ಯ ದಿನಾಚರಣೆಯ ದಿನ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ಸಚಿವ ಸೋಮಣ್ಣ ಸುಳಿವು ನೀಡಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಯಾರೂ ನಿರೀಕ್ಷೆ ಮಾಡದಂತಹ ಯೋಜನೆಯನ್ನು ಘೋಷಣೆ ಮಾಡಲಾಗುವುದು. 15 ರಿಂದ 20 ದಿನದಲ್ಲಿ ಸರ್ಕಾರ ಟೇಕಾಫ್ ಆದ ಭಾವನೆ ಬರಲಿದೆ ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ನಂತರ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಈಗ ಮತ್ತೊಂದು ಹೊಸ ಯೋಜನೆ ಜಾರಿ ಬಗ್ಗೆ ಸೋಮಣ್ಣ ಸುಳಿವು ನೀಡಿದ್ದಾರೆ ಎನ್ನಲಾಗಿದೆ.