ನವದೆಹಲಿ: ತುಮಕೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ವಿ. ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಇದೇ ಸಂದರ್ಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯದಿಂದ ಹೆಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ, ವಿ. ಸೋಮಣ್ಣ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.