![](https://kannadadunia.com/wp-content/uploads/2023/04/v-somanna-98516491.jpg)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅಸಮಾಧಾನ ವ್ಯಕಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ಅವರ ಬಗ್ಗೆ ಮಾತನಾಡಲು ಇನ್ನು ಕಾಲ ಬಂದಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ವಿಜಯೇಂದ್ರ ಬಗ್ಗೆ ಮಾತನಾಡಲು ಇನ್ನೂ ಕಾಲ ಬಂದಿಲ್ಲ. ಅವರ ನೇಮಕದ ಬಗ್ಗೆ ಕಾಲವೇ ಉತ್ತರ ಕೊಡುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಬಿಜೆಪಿ ಪಕ್ಷಕ್ಕೆ ನನ್ನದೂ ದುಡಿಮೆ ಇದೆ. ನನಗೆ ಡಬಲ್ ಗೇಮ್ ಆಡೋದು ಗೊತ್ತಿಲ್ಲ. ಅಭಿಪ್ರಾಯಗಳನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಒಬ್ಬ ಕೆಲಸ ಮಾಡುವವನಿಗೆ, ಜನಪ್ರಿಯನಾದವನಿಗೆ ಮುಜುಗರದ ಸಂಗತಿಗಳು ಎದುರಾಗುತ್ತವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಯಾವುದೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಬಗ್ಗೆಯೂ ಯೋಚಿಸಿಲ್ಲ ಎಂದು ಹೇಳಿದರು.