ಮೈಸೂರು: ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಚಾಮರಾಜನಗರ ಸಂಸದರಾದ ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.
ಮೈಸೂರಿನ ಕಲಾಮಂದಿರದಲ್ಲಿ ಸಮಾನತೆ, ಸ್ವಾಭಿಮಾನ, ಸ್ವಾವಲಂಬನೆ ಪ್ರತಿಷ್ಠಾನ ಹಾಗೂ ಸಮಾನತೆ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾರಣಗಳು ಮತಕ್ಕಾಗಿ ದಲಿತರನ್ನು ಒಡೆಯುತ್ತಿದ್ದಾರೆ. ಬ್ರಿಟಿಷರ ಒಡೆದು ಆಳುವ ನೀತಿಗಿಂತಲೂ ಈ ಬೆಳವಣಿಗೆ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.
ಒಳ ಮೀಸಲಾತಿ ಚರ್ಚೆ ನಡೆಯಬೇಕು. ಒಡಕು ಉಂಟುಮಾಡುವ ರಾಜಕಾರಣ ಬೇಡವೆಂದು ಹೇಳಿದ ಅವರು ಇದೇ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ಪ್ರಸ್ತಾಪಿಸಿ, 1977ರಲ್ಲಿ ಜನತಾ ಪಕ್ಷದಿಂದ ರಾಜಕೀಯ ಪ್ರವೇಶ ಮಾಡಿ ಮೊದಲ ಚುನಾವಣೆಯಲ್ಲಿ ಜಯಗಳಿಸಿದ್ದೆ. ಇದುವರೆಗೆ 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಇನ್ನು ಸಂಸದನಾಗಿ ಒಂದೂವರೆ ವರ್ಷ ಪೂರ್ಣಗೊಳಿಸಿದರೆ. ರಾಜಕೀಯ ಜೀವನಕ್ಕೆ 50 ವರ್ಷವಾಗಲಿದ್ದು, ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ ಎಂದು ತಿಳಿಸಿದ್ದಾರೆ.