ಬೆಂಗಳೂರು: ಅಮೃತ ಜ್ಯೋತಿ ಯೋಜನೆ ಅಡಿ ಫಲಾನುಭವಿಗಳನ್ನು ನೋಂದಾಯಿಸಲು ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ಕೈಗೊಳ್ಳಲು ಇಂಧನ ಸಚಿವ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಈಗಾಗಲೇ 2.5 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು, ಅಭಿಯಾನದಲ್ಲಿ 10 ಲಕ್ಷ ಮಂದಿಯನ್ನು ಗುರುತಿಸಿ ನೋಂದಣಿ ಮಾಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಅಲ್ಲದೇ, ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲಿದ್ದು, ಇದಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ಬೆಳಕು ಯೋಜನೆ ಅಡಿ ಇದುವರೆಗೆ ಸಲ್ಲಿಕೆಯಾದ ಅರ್ಜಿಗಳಿಗೆ ವಿದ್ಯುತ್ ಸಂಪರ್ಕ ನೀಡುವ ಪ್ರಕ್ರಿಯೆ ಪರಿಶೀಲಿಸಿ ನವೆಂಬರ್ 15 ರೊಳಗೆ ಸಂಪರ್ಕ ನೀಡುವಂತೆ ತಿಳಿಸಿದ್ದಾರೆ.