ನವದೆಹಲಿ: ದೇಶದಲ್ಲಿ ಇಂದಿನಿಂದ ಕೊರೋನಾ ಲಸಿಕೆ ನೀಡಿಕೆ ಆರಂಭವಾಗಲಿದೆ. ವಿಶ್ವದಲ್ಲಿ ಅತಿ ದೊಡ್ಡ ಲಸಿಕಾ ಅಭಿಯಾನ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ದೇಶಾದ್ಯಂತ ಸುಮಾರು 3000 ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದು, ಪ್ರತಿ ಕೇಂದ್ರದಲ್ಲಿ ಪ್ರತಿ ದಿನ 100 ಮಂದಿಗೆ ಲಸಿಕೆ ನೀಡಲಾಗುವುದು. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಸುಮಾರು 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 3 ಕೋಟಿ ಕೊರೋನಾ ವಾರಿಯರ್ಸ್ ಗಳ ಲಸಿಕೆ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತದೆ.