ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ ಮುಕ್ತ ಮಾರುಕಟ್ಟೆಯಲ್ಲಿಯೂ ವ್ಯಾಕ್ಸಿನ್ ಸಿಗಲಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಗಾಗಿ ಕಾಯದೇ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಪಡೆಯಬಹುದು. ಇತರೆ ಔಷಧಗಳ ರೀತಿಯಲ್ಲೇ ಮುಕ್ತ ಮಾರುಕಟ್ಟೆಯಲ್ಲಿಯೂ ಕೊರೋನಾ ಲಸಿಕೆ ಲಭ್ಯವಾಗಲಿದೆ. ಕೊರೋನಾ ಲಸಿಕೆ ಉತ್ಪಾದಿಸುವ ಕಂಪನಿಗಳಿಂದ ರಾಜ್ಯಗಳು ನೇರವಾಗಿ ಲಸಿಕೆ ಖರೀದಿಸಲು ಅವಕಾಶ ನೀಡಲಾಗಿದೆ.
ಅಲ್ಲದೆ, ಕಂಪನಿಗಳು ಮಾಸಿಕ ಶೇಕಡ 50 ರಷ್ಟು ಕೇಂದ್ರಕ್ಕೆ ಪೂರೈಕೆ ಮಾಡಬೇಕಿದೆ. ಉಳಿದ ಶೇಕಡ 50 ರಷ್ಟು ಡೋಸ್ ಲಸಿಕೆಯನ್ನು ರಾಜ್ಯಗಳು ಖಾಸಗಿ ಮಾರುಕಟ್ಟೆಗೆ ಪೂರೈಕೆ ಮಾಡಬಹುದು. ಕೇಂದ್ರ ಸರ್ಕಾರದ ಮಿತಿಗೆ ಒಳಪಟ್ಟು ಉತ್ಪಾದನೆ ಕಂಪನಿಗಳು ಲಸಿಕೆ ದರ ನಿಗದಿಪಡಿಸಬೇಕು. 45 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ನೀಡಿಕೆ ಕಾರ್ಯ ಮುಂದುವರೆಯಲಿದೆ.