ನವದೆಹಲಿ: ಕೊರೋನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಹೊಸ ದಾಖಲೆ ಬರೆದಿದೆ. ಇವತ್ತು ಒಂದೇ ದಿನ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿತ್ತು. ಇವತ್ತು ಕೂಡ ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ಮೂಲಕ ಭಾರತ ಹೊಸ ದಾಖಲೆ ಸೃಷ್ಟಿಸಿದೆ.
ದೇಶದಲ್ಲಿ ಇಂದು ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ಮೂಲಕ ಎರಡನೇ ಬಾರಿ ದೇಶದಲ್ಲಿ ಒಂದು ಕೋಟಿ ಜನರಿಗೆ ಲಸಿಕೆ ನೀಡಿದಂತಾಗಿದೆ. ಈ ಮೂಲಕ ವ್ಯಾಕ್ಸಿನೇಷನ್ ನಲ್ಲಿ ಭಾರತ ಮತ್ತೊಂದು ದಾಖಲೆ ಬರೆದಿದೆ. ಇದುವರೆಗೆ 65 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.