ನವದೆಹಲಿ: ಜನವರಿ 16 ರಿಂದ ಲಸಿಕೆ ವಿತರಿಸಲು ಕೊನೆ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಅದೇ ದಿನ ಲಸಿಕೆ ಮಾಹಿತಿ ಅಪ್ಲೋಡ್ ಮಾಡುವ ಮೂಲಕ ಕೋವಿನ್ ಆಪ್ ಅನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ದೇಶದ ಎಲ್ಲಾ ಭಾಗಗಳಿಗೆ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ. ಪುಣೆಯ ಸೀರಮ್ ಇನ್ ಸ್ಟಿಟ್ಯೂಟ್ ಮತ್ತು ಹೈದರಬಾದ್ ನ ಭಾರತ್ ಬಯೋಟೆಕ್ ನಿಂದ ಲಸಿಕೆ ರವಾನೆ ಮಾಡಲಾಗಿದೆ.
ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಕೇಂದ್ರ ಸರ್ಕಾರ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಬಳಕೆಗೆ ಅನುಮೋದನೆ ನೀಡಿದೆ. ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.