ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂಬ ಆದೇಶ ಹೊರಡಿಸಲಾಗಿತ್ತು. ಆದರೆ ಈಗ ಗಡುವು ವಿಸ್ತರಣೆ ಮಾಡಲಾಗಿದೆ.
ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದರಿಂದ ಡೆಡ್ ಲೈನ್ ನನ್ನು ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಾವಣಗೆರೆ ಜಿಲ್ಲಾ ಎಸ್ ಪಿ, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಇನ್ನೂ ಮೂರ್ನಾಲ್ಕು ತಿಂಗಳ ಅವಧಿ ನೀಡಲಾಗಿದೆ. ಇಷ್ಟಾದರೂ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ಕಡ್ಡಾಯವಾಗಿ ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ನಂಬರ್ ಪ್ಲೇಟ್ ಅಳವಡಿಕೆಯಿಂದ ವಾಹನ ಮಾಲೀಕರಿಗೆ ಉಪಯುಕ್ತ ಜೊತೆಗೆ ಯಾವುದೇ ಅಪರಾಧ ಕೃತ್ಯಗಳಲ್ಲಿ ವಾಹನ ಬಳಸಿದರೆ ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
2019ಕ್ಕಿಂತ ಮೊದಲು ನೋಂದಣಿಯಾದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಕಾರು ಸೇರಿದಂತೆ ಎಲ್ಲ ಹಳೆಯ ವಾಹನಗಳಿಗೂ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿದೆ.