
ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಾಗ ಯಾತ್ರಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದಾರೆ.
ಜಮ್ಮು-ಕಾಶ್ಮೀರದ ಮಾಂದಾರದಲ್ಲಿರುವ ಮಾತಾ ವೈಷ್ಣೋದೇವಿ ದರ್ಶನ ಪಡೆದು ಯಾತ್ರಿಕರು ಕತ್ರಾದಿಂದ ಬಸ್ ನಲ್ಲಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನ ನ್ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳಲ್ಲಿ 7 ಮಹಿಳೆಯರು ಹಾಗೂ 10 ಪುರುಷರು ಇದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಗ್ಗೆ ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಚಾಲಕನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.