ಬೆಂಗಳೂರು : ‘ವಾಲ್ಮೀಕಿ’ ಮತ್ತು ‘ಮುಡಾ’ ಹಗರಣ ವಿಪಕ್ಷಗಳಿಗೆ ಟೀಕೆ ಮಾಡಲು ಆಹಾರವಾಗಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.
ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣ ಈ ಎರಡೂ ಕೂಡಾ ಸಿಎಂ ಸಿದ್ದರಾಮಯ್ಯ ಅವರ ಸುಪರ್ದಿಯಲ್ಲೇ ನಡೆದಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರದ ಹಣ ಕಾಂಗ್ರೆಸ್ ಹೈಕಮಾಂಡಿಗೆ ವರ್ಗಾವಣೆಯಾಗಿದೆ. ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮದ ವಾಸನೆ ಬರುತ್ತಿದೆ. ನಿಯಮ ಬಾಹಿರವಾಗಿ ತಮ್ಮ ಪತ್ನಿಗೆ ಸಿಎಂ ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಈಗ ಭ್ರಷ್ಟಾಚಾರದ ಕೂಪವಾಗಿದೆ. ಇದರ ವಿರುದ್ಧ ಬಿಜೆಪಿ ಮಾಡುತ್ತಿರುವ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.